ಫೆ.15ರಂದು ಸಂತ ಸೇವಾಲಾಲ ಜಯಂತಿ
Update: 2024-02-14 21:12 IST
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಸಂತ ಶ್ರೀ ಸೇವಾಲಾಲ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಸಂತ ಸೇವಾಲಾಲ ಜಯಂತಿ ಕಾರ್ಯಕ್ರಮ ಫೆ.15ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರೊಂದಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಶ್ ಅಡಿಗ, ಜಿಲ್ಲಾ ಕೃಷ್ಣನಗರಿ ಸಂತ ಶ್ರೀ ಸೇವಾಲಾಲ ಬಂಜಾರ ಸಂಘದ ಅಧ್ಯಕ್ಷ ಕುಮಾರ್ ಕೆ.ಎಮ್, ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕುಮಾರ್ ಎಂ. ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.