×
Ad

ಅ.15ರಂದು ಬಿಜೆಪಿಯಿಂದ ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’

Update: 2024-10-14 19:12 IST

ಉಡುಪಿ, ಅ.14: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ’ಜನಪ್ರತಿನಿಧಿಗಳ ಸಮಾವೇಶ’ವು ಅ.15ರಂದು ಮಧ್ಯಾಹ್ನ 3ಗಂಟೆಗೆ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ.

ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಲಿರುವರು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News