ಆ.15: ಉದ್ಯಾವರದಲ್ಲಿ ವಿದ್ಯಾರ್ಥಿ ವೇತನ, ಸಮವಸ್ತ್ರ ವಿತರಣೆ
ಉದ್ಯಾವರ, ಆ.12: ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗ್ರಾಮದ ಪ್ರಾಥಮಿಕ, ಪ್ರೌಢ ಶಾಲಾ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಇದೇ ಆ.15ರ ಅಪರಾಹ್ನ 2 ಗಂಟೆಗೆ ಉದ್ಯಾವರದ ಹಪ್ಸಾ ಅಡಿಟೋರಿಯಂ ನಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ನಿರ್ದೇಶಕ ಅಬ್ದುಲ್ ಜಲೀಲ್ ಸಾಹೇಬ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉದ್ಯಾವರ ಸೈಂಟ್ ಫ್ರಾನ್ಸಿನ ಕ್ಷೇವಿಯರ್ ಚರ್ಚ್‌ನ ಧರ್ಮಗುರುಗಳಾದ ವಂ. ಅನಿಲ್ ಡಿಸೋಜ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಮತ್ತು ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತುಲ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.