×
Ad

ಆ.15ರಂದು ಮಜೂರು ಗ್ರಾಪಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Update: 2025-08-13 21:21 IST

ಉಡುಪಿ, ಆ.13: ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯತ್‌ನ ನವೀಕೃತ ಸಭಾಭವನದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಆಗಸ್ಟ್ 15ರ ಶುಕ್ರವಾರ ಅಪರಾಹ್ನ 2:00ಗಂಟೆಗೆ ಮಜೂರು ಗ್ರಾಪಂ ಸಭಾಭವನ ದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಗ್ರಾಪಂನ ನವೀಕೃತ ಸಭಾಭವನವನ್ನು ಉದ್ಘಾಟಿಸಲಿ ದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿರುವರು.

ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮಜೂರು ಗ್ರಾಪಂ ವೆಬ್‌ಸೈಟ್‌ನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ ಎಂದು ಗ್ರಾಪಂನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News