ಸೆ.15ಕ್ಕೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆ
Update: 2025-09-13 19:28 IST
ಉಡುಪಿ, ಸೆ.13: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗ ವಾಗಿ ಸೆ.15ರಂದು ಬೆಳಗ್ಗೆ 6:30ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ದಲ್ಲಿ ‘ನನ್ನ ಮತ ನನ್ನ ಹಕ್ಕು’, ‘ಗಾಂಧೀ ಭಾರತ’ ಹಾಗೂ ‘ಸಂವಿಧಾನ ಪೀಠಿಕೆ’ ಎಂಬ ಧ್ಯೇಯ ವಾಕ್ಯದಡಿ ಜಿಲ್ಲಾ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಛಾಯಾಚಿತ್ರ ಹಾಗೂ ಭಾಷಣ ಸ್ಪರ್ಧೆಗಳನ್ನು ಪ್ರಾರಂಭಿಸಲು ಚಾಲನೆ ನೀಡಲಾಗುತ್ತದೆ.
ಜಿಲ್ಲಾ ಕ್ರೀಡಾಂಗಣದಿಂದ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಛೇರಿಯ ವರೆಗೆ ಸೈಕಲ್ ರ್ಯಾಲಿಯನ್ನು ಆಯೋಜಿಸಲಾಗಿದೆ. ಇದರಲ್ಲಿ ಜನಪ್ರತಿನಿಧಿ ಗಳು, ಅಧಿಕಾರಿ ಹಾಗೂ ಸಿಬ್ಬಂದಿಗಳು, ಕಾರ್ಮಿಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.