ನ.15ರಂದು ಕೇಂದ್ರ ಸಚಿವ ಕುಮಾರಸ್ವಾಮಿ ಉಡುಪಿಗೆ ಭೇಟಿ
ಉಡುಪಿ, ನ.14: ಕರ್ನಾಟಕದ ಜಾತ್ಯತೀತ ಜನತಾ ದಳದ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಎರಡು ದಿನಗಳ ಕಾಲ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ರವಿವಾರ ಸಂಜೆ 7:30ಕ್ಕೆ ಬೆಂಗಳೂರಿನಿಂದ ಉಡುಪಿಗೆ ಆಗಮಿಸುವ ಕುಮಾರಸ್ವಾಮಿ, ನೇರವಾಗಿ ಕೊಲ್ಲೂರಿಗೆ ತೆರಳಿ ಅಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೋಮವಾರ ನ.16ರ ಮುಂಜಾನೆ 6:15ಕ್ಕೆ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುವ ಅಪರಾಹ್ನ 12:30ರ ಸುಮಾರಿಗೆ ಕಾಪು ಹೊಸಮಾರಿಗುಡಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಲಿದ್ದಾರೆ ಎಂದು ಜಾತ್ಯತೀತ ಜನತಾದಳದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.