ಜೂ.16ರಂದು ಬಿಜೆಪಿ ನೂತನ ಉಡುಪಿ ಜಿಲ್ಲಾಧ್ಯಕ್ಷ ಜವಾಬ್ದಾರಿ ಸ್ವೀಕಾರ
Update: 2025-06-15 17:25 IST
ಉಡುಪಿ: ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲೆಯ ಶಾಸಕರುಗಳಾದ ವಿ.ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಎ.ಸುವರ್ಣ, ಕಿರಣ್ ಕುಮಾರ್ ಕೊಡ್ಗಿ ಮತ್ತು ಗುರುರಾಜ್ ಗಂಟಿಹೊಳೆ ಅವರೊಂದಿಗೆ ಶನಿವಾರ ಉಡುಪಿಯ ಹೋಟೆಲೊಂದರ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಿದರು.
ಜೂ.16ರಂದು ಬೆಳಿಗ್ಗೆ 11.30ಕ್ಕೆ ನೂತನ ಜಿಲ್ಲಾಧ್ಯಕ್ಷರ ಜವಾಬ್ದಾರಿ ಸ್ವೀಕಾರ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟಿ ಬೆಳೆಸಲು ಎಲ್ಲರೂ ಜೊತೆಯಾಗಿ ಬದ್ಧತೆಯಿಂದ ತೊಡಗಿಸಿಕೊಳ್ಳಲು ನಿರ್ಧರಿಸಲಾಯಿತು ಎಂದು ನಿಯೋಜಿತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.