×
Ad

ಫೆ.17: ವಾಹನಗಳ ಸಂಚಾರ ಗಣತಿ

Update: 2025-02-11 19:50 IST

ಮಂಗಳೂರು,ಫೆ.11: ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯನ್ನು ನಡೆಸಲಾಗುತ್ತಿದೆ.

2025ನೇ ಸಾಲಿನಲ್ಲಿ ರಸ್ತೆ ಸಂಚಾರ ಗಣತಿಯನ್ನು ಫೆ.17ರಂದು ಬೆಳಗ್ಗೆ 6ರಿಂದ ಫೆ.24ರ ಬೆಳಗ್ಗೆ 6 ಗಂಟೆವರೆಗೆ ಸತತ ವಾಗಿ 7 ದಿನಗಳ ಕಾಲ ನಡೆಸಲಾಗುವುದು. ದ.ಕ. ಜಿಲ್ಲೆಯಲ್ಲಿ ಈ ಗಣತಿಗೆ ಸುಮಾರು 126 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ.

ವಾಹನ ಸಂಚಾರದ ಬೆಳವಣಿಗೆಯ ತೀವ್ರತೆಯನ್ನು ಗಮನಿಸಿ ರಸ್ತೆಗಳ ಮೇಲ್ಮೈಯನ್ನು ಅಭಿವೃದ್ಧಿ ಪಡಿಸುವುದು, ರಸ್ತೆಗಳನ್ನು ಅಗಲಪಡಿಸುವುದು ಹಾಗೂ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಇತ್ಯಾದಿ ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮ ಗಳನ್ನು ಸರಕಾರವು ರೂಪಿಸಲು ಮತ್ತು ಕೈಗೆತ್ತಿಗೊಳ್ಳುವ ಉದ್ದೇಶದಿಂದ ವಾಹನಗಳ ಸಂಚಾರ ಗಣತಿ ನಡೆಸಲಾಗುತ್ತದೆ.

ವಾಹನ ಸಂಚಾರ ವಿವರಗಳನ್ನು ಸಂಗ್ರಸಲು ದ.ಕ. ಜಿಲ್ಲೆಯ 126 ಗಣತಿ ಕೇಂದ್ರಗಳಲ್ಲಿ ಸಹಾಯಕ ಇಂಜಿನಿಯರ್/ಕಿರಿಯ ಇಂಜಿನಿಯರ್‌ಗಳನ್ನು ನೇಮಿಸಲಾಗಿದೆ. ಈ ವಾಹನ ಸಂಚಾರದ ಗಣತಿಗೆ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸ ಬೇಕು ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News