ಜೂ.17ರಂದು ವಿಶ್ವ ರಕ್ತದಾನಿಗಳ ದಿನಾಚರಣೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ, ಯೂತ್ ರೆಡ್‌ಕ್ರಾಸ್, ರೋಟರ್ಯಾಕ್ಟ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುತ್ಪಾಡಿ ಹಾಗೂ ಜೆಸಿಐ ಅಲೂಮಿನಿ ಕ್ಲಬ್ ವಲಯ 15 ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ -2025, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ. 17ರಂದು ಬೆಳಗ್ಗೆ 10 ಗಂಟೆಗೆ ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋ ಧನಾ ಕೇಂದ್ರದ ಪ್ರಾಂಶುಪಾಲೆ ಡಾ.ಮಮತಾ ಕೆ., ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಎಸ್., ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ, ನಾಗರಾಜ್ ಎಸ್, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾಕುಮಾರಿ ಹಾಗೂ ಇತರರು ಭಾಗವಹಿಸಲಿದ್ದಾರೆ.