17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2026-08-21 21:52 IST
ಉಡುಪಿ, ಆ.21: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆಯ ಬೇಗೂರು ರಸ್ತೆಯ ವಾಣೀಶ್ರೀ ರೇಣುಕಾ(42) ಬಂಧಿತ ಆರೋಪಿ. ಆ.20ರಂದು ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರೂಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಳಿಕ ಆರೋಪಿಯನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಿಸಲಾಗಿದೆ.