ನ.17: ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ ಪ್ರವಾಸ
ಉಡುಪಿ, ನ.12: ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಝ್ವಾನ್ ಅರ್ಷದ್ ಅವರು ನವೆಂಬರ್ 17 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಕಾರ್ಕಳದ ಬಂಗ್ಲೆಗುಡ್ಡಯಲ್ಲಿ ನಗರೋತ್ಥಾನ ಯೋಜನೆಯಡಿ ರ್ನಿುಸಲಾದ ಸಭಾಭವನ ಉದ್ಘಾಟಿಸುವ ಸಚಿವರು, 10:30ಕ್ಕೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ತಾಲೂಕು ಮಟ್ಟದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಪರಾಹ್ನ 3:00ಗಂಟೆಗೆ ಉಡುಪಿ ಜಿಲ್ಲಾ ಪ್ರವಾಸೋದ್ಯಮ ಮಾಹಿತಿ ಕೇಂದ್ರವನ್ನು ಉದ್ಘಾಟಿಸುವ ಉಸ್ತುವಾರಿ ಸಚಿವರು ನಂತರ ಮಂಗಳೂರಿಗೆ ತೆರಳಿ ಅಲ್ಲಿಂದ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.