×
Ad

ಜ.18ರಂದು ಸಚಿವೆ ಶೋಭಾರಿಂದ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನ ಪ್ರಾಂಗಣ ಸ್ವಚ್ಛತೆ

Update: 2024-01-16 19:27 IST

ಉಡುಪಿ, ಜ.16: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ನಿಮಿತ್ತ ಜ.12ರಿಂದ 22ರವರೆಗೆ ದೇಶದ ತೀರ್ಥಕ್ಷೇತ್ರಗಳನ್ನು, ಮಂದಿರಗಳನ್ನು ಸ್ವಚ್ಛಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಈ ಪ್ರಯುಕ್ತ ತಾವು ಜ.18ರಂದು ನಗರದ ಬನ್ನಂಜೆಯಲ್ಲಿರುವ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣವನ್ನು ಸ್ವಚ್ಛಗೊಳಿಸುವು ದಾಗಿ ಕೇಂದ್ರ ಸಚಿವೆ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 9:30ಕ್ಕೆ ತಾವು ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ಕಾರ್ಯಕರ್ತರೊಂದಿಗೆ ಬನ್ನಂಜೆ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವುದಾಗಿ ಶೋಭಾ ತಿಳಿಸಿದ್ದಾರೆ ಎಂದರು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News