18 ವರ್ಷಗಳ ಹಳೆಯ ಪ್ರಕರಣದ ಆರೋಪಿ ಬಂಧನ
Update: 2025-02-11 21:28 IST
ಉಡುಪಿ, ಫೆ.11: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 18 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿ ಕೊಂಡಿದ್ದ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ ಅಬ್ದುಲ್ ಹಮೀದ್(48) ಬಂಧಿತ ಆರೋಪಿಗಳು. ಖಚಿತ ಮಾಹಿತಿಯಂತೆ ಉಡುಪಿ ನಗರ ಠಾಣೆಯ ಸಿಬ್ಬಂದಿ ಸಂಜಯ್ ಹಾಗೂ ಹೇಮಂತ್ ಕುಮಾರ್ ಆರೋಪಿಯನ್ನು ಮಂಡ್ಯ ಜಿಲ್ಲೆಯ ತಾವರೆಗೆರೆ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಫೆ.25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.