×
Ad

ಜೂ.18ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Update: 2026-06-16 20:58 IST

ಉಡುಪಿ, ಜೂ.16: ಮಣಿಪಾಲದಲ್ಲಿರುವ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ (ಮನೋಹರ್ ಭವನ್ ಹೋಟೆಲ್ ಮುಂಭಾಗ) ಇಲ್ಲಿ ಜೂನ್ 18ರಂದು ಬೆಳಿಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಡಿಪ್ಲೋಮಾ, ಮೆಕ್ಯಾನಿಕಲ್ ಮತ್ತು ಸಿಎನ್‌ಸಿ ಪ್ರಿಂಟಿಂಗ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂ: 8105618291, 9945856670 ಹಾಗೂ 9901472710ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News