ಉಡುಪಿ, ಸೆ.17: ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೆ.18ರ ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಪರಾಹ್ನ 3 ಗಂಟೆಗೆ ಹೆಬ್ರಿ ಹೆಲಿಪ್ಯಾಡ್‌ಗೆ ಆಗಮಿಸುವ ಅವರು ನಂತರ ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಸಭೆಯಲ್ಲಿ ಭಾಗವಸಲಿದ್ದಾರೆ. ಸಂಜೆ 5ಗಂಟೆಗೆ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಮುಖ್ಯಮಂತ್ರಿಗಳೊಂದಿಗೆ ರಾಜ್ಯ ಸಚಿವ ಸಂಪುಟದ ಹಲವು ಸಚಿವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಜಲ ಸಂಪನ್ಮೂಲ ಇಲಾಖೆ ಸಚಿವ ಎನ್ ಚೆಲುವರಾಯ ಸ್ವಾಮಿ ಮುಂತಾದವರು ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor