ಮಣಿಪಾಲ, ಅ.5: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣ ವೊಂದರಲ್ಲಿ ಕಳೆದ 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಾರೆಂಟ್ ಆರೋಪಿಗಳಾದ ಮುಹಮ್ಮದ್ ಹನೀಫ್ ಮತ್ತು ಫಯಾಜ್ ಮಹಮ್ಮದ್ ಬಂಧಿತ ಆರೋಪಿಗಳು. ಮಣಿಪಾಲ ಠಾಣಾ ಸಿಬ್ಬಂದಿ ಚೇತನ್ ಮತ್ತು ಮಂಜುನಾಥ ಆರೋಪಿಗಳನ್ನು ಉಳ್ಳಾಲ ಮತ್ತು ತಲಪಾಡಿ ಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗಳಿಗೆ ತಲಾ 10,000ರೂ. ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor