×
Ad

ಫೆ.19ರಂದು ಸಂತಾನೋತ್ಪತ್ತಿ, ಮಕ್ಕಳ ಆರೋಗ್ಯ ಕಾರ್ಯಕ್ರಮ

Update: 2025-02-18 21:38 IST

ಉಡುಪಿ, ಫೆ.18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಮಿಷನ್ ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಕಮ್ಯುನಿಟಿ ಮೆಡಿಸಿನ್ ವಿಭಾಗಗಳ ಸಹಯೋಗದಲ್ಲಿ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮದ ಸಮಗ್ರ ಪರಿಚಯ ಕಾರ್ಯಕ್ರಮ ಫೆ.19ರಂದು ಬೆಳಗ್ಗೆ 9:30ಕ್ಕೆ ಮಣಿಪಾಲ ಕೆಎಂಸಿಯ ಮೂರನೇ ಮಹಡಿಯ ಡಾ.ಟಿ.ಎಂ.ಎ ಪೈ ಆಡಿಟೋರಿಯಂನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿ ಸಲಿದ್ದು, ಮಣಿಪಾಲ ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಪ್ರೊ ವೈಸ್ ಚಾನ್ಸಲರ್ ಡಾ.ಶರತ್ ಕೆ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರತ್ನ, ಮಕ್ಕಳ ಆರೋಗ್ಯಾಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಪದ್ಮರಾಜ್ ಹೆಗಡೆ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News