×
Ad

ಜು.19: ಜಲವಳ್ಳಿಗೆ ಯಕ್ಷಸಾಧಕ ಪ್ರಶಸ್ತಿ ಪ್ರದಾನ

Update: 2025-07-17 20:06 IST

ಉಡುಪಿ, ಜು.17:ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಹಾಗೂ ಉಜ್ವಲ್ ಡೆವಲಪರ್ಸ್ ಉಡುಪಿ ಇವರ ಸಹಯೋಗದಲ್ಲಿ ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಗುರು ಮಟಪಾಡಿ ವೀರಭದ್ರ ನಾಯಕ್ ಯಕ್ಷಸಾಧಕ ಪ್ರಶಸ್ತಿಯನ್ನು ಈ ಬಾರಿ ಬಡಗುತಿಟ್ಟಿನ ಖ್ಯಾತ ಯಕ್ಷಗಾನ ಕಲಾವಿದ ವಿದ್ಯಾಧರ ರಾವ್ ಜಲವಳ್ಳಿ ಇವರಿಗೆ ಜು.19ರ ಶನಿವಾರ ಅಪರಾಹ್ನ 3:00 ಗಂಟೆಗೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗು ವುದು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಿಂದ ಕೃಷ್ಣಾರ್ಜುನ ಕಾಳಗ ಹಾಗೂ ರಾಜಾ ಭದ್ರಸೇನ ಎಂಬ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News