ಜು.2ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
ಉಡುಪಿ, ಜೂ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಳ ಸಂಯುಕ್ತ ಆಶ್ರಯದಲ್ಲಿ ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಜು.2ರ ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎವಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿ ದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸುತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಹಾಗೂ ಇತರರು ಭಾಗವಹಿಸುವರು. ಖ್ಯಾತ ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಡಾ.ಫ.ಗು. ಹಳಕಟ್ಟಿ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.