×
Ad

ಫೆ.20ರವರೆಗೆ ಉಡುಪಿ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ

Update: 2024-02-09 21:26 IST

ಉಡುಪಿ, ಫೆ.9: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕಿನಲ್ಲಿ ಫೆಬ್ರವರಿ 11ರಿಂದ 20 ರವರೆಗೆ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ನಿಗದಿಪಡಿಸಿದ ವೇಳಾಪಟ್ಟಿಯಂತೆ ಸಂವಿಧಾನ ಕುರಿತ ಸ್ಥಬ್ಧಚಿತ್ರ ಜಾಥಾ ಸಂಚರಿಸಲಿದೆ.

ಜಾಥಾ ಕಾರ್ಯಕ್ರಮದಲ್ಲಿ ತಾಲೂಕಿನ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಿಡಿಓಗಳು, ಸಾರ್ವಜನಿಕರು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವಂತೆ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News