ಆ.20ರಂದು ನೇರ ಸಂದರ್ಶನ
Update: 2026-08-19 20:49 IST
ಉಡುಪಿ, ಆ.19: ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್ ಎಂಟ್ರಿ ಇಲ್ಲಿನ 3ನೇ ಮಹಡಿಯ ಓಮ್ನಿಯನ್ ಪ್ರೀಮಿಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ಆಗಸ್ಟ್ 20ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
3ಡಿ/ಫೋಟೋಶಾಪ್, ಸಿಎಸ್‌ಆರ್ ಮತ್ತು ಅಕೌಂಟಿಂಗ್ ಹುದ್ದೆಗಳಿಗೆ, ಪಿಯುಸಿ, ಎಂಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಮತ್ತು 8150961875 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.