×
Ad

ಬೈಂದೂರು: 200 ಚೀಲ ಅಡಿಕೆ ಕಳವು

Update: 2025-05-23 23:59 IST

ಸಾಂದರ್ಭಿಕ ಚಿತ್ರ

ಬೈಂದೂರು: ಗೋಡಾನ್‌ನಲ್ಲಿ ಇರಿಸಲಾದ ಸಾವಿರಾರು ರೂ. ಮೌಲ್ಯದ ಅಡಿಕೆ ತುಂಬಿದ ಚೀಲಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ಯಡ್ತರೆ ಗ್ರಾಮದ ಹಡಿನಗದ್ದೆ ಎಂಬಲ್ಲಿ ನಡೆದಿದೆ.

ಮಸೂದ್ ಪಟೇಲ್ ಎಂಬವರು ಸುಮಾರು 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಪ್ಯಾಸ್ಟಿಕ್ ಚೀಲದಲ್ಲಿ ಹಾಕಿ ಚೀಲ ಮಾಡಿ ಗೋಡೌನ್‌ನಲ್ಲಿ ಇಟ್ಟಿದ್ದು, ಮೇ 15ರಿಂದ ಮೇ 22ರ ಮಧ್ಯಾವದಿಯಲ್ಲಿ ಗೋಡೌನ್ ಬೀಗ ಮುರಿದು ಒಳನುಗ್ಗಿದ ಕಳ್ಳರು, 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News