×
Ad

2000ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ

Update: 2025-11-01 17:44 IST

ಉಡುಪಿ, ನ.1: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ದೊಡ್ಡಣಗುಡ್ಡೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಉಡುಪಿ, ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮತ್ತು ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ 2000ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ಗುರುವಾರ ನಡೆಯಿತು.

ಕಾರ್ಯಕ್ರಮವನ್ನು ಮನೋ ವೈದ್ಯಕೀಯ ಸಂಘ ಕರ್ನಾಟಕ ಶಾಖೆ ಅಧ್ಯಕ್ಷ ಡಾ.ಅನಿಲ್ ಕುಮಾರ್ ಎಂ.ಎನ್. ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶಂಕರ್ ಕುಲಾಲ್ ಪೆರಂಪಳ್ಳಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ಡಾ.ಅಶೋಕ್ ಕುಮಾರ್, ಭಾರತೀಯ ಜೈನ್ ಮಿಲನ್‌ನ ಪ್ರಸನ್ನ ಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ನಗರಸಭೆ ಅಧ್ಯಕ್ಷ್ಷ ಪ್ರಭಾಕರ್ ಪೂಜಾರಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ನಗರಸಭೆ ಸದಸ್ಯ ಸುಂದರ್ ಜೆ.ಕಲ್ಮಾಡಿ, ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಮಹಾಬಲ ಶೆಟ್ಟಿ ಉಪಸ್ಥಿತರಿದ್ದರು.

ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ ಆಚಾರ್ಯ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಉಡುಪಿ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಸುರೇಂದ್ರ ನಾಯಕ್ ಸ್ವಾಗತಿಸಿದರು. ಮೇಲ್ವಿಚಾರಕ ಬಾಲಚಂದ್ರ ಕಾರ್ಯ ಕ್ರಮ ನಿರೂಪಿಸಿದರು. ಜನಜಾಗೃತಿ ಮೇಲ್ವಿಚಾರಕ ನಿತೇಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News