×
Ad

ಫೆ.21ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ

Update: 2025-02-19 21:01 IST

ಉಡುಪಿ, ಫೆ.19: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆ, ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು, ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಹಾಗೂ ಹಿರಿಯ ನಾಗರಿಕರ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಮತ್ತು ಆಯ್ದ ಬಡ ಫಲಾನುಭವಿಗಳಿಗೆ ಉಚಿತ ಶ್ರವಣ ಸಾಧನಗಳ ವಿತರಣಾ ಕಾರ್ಯಕ್ರಮ ಫೆಬ್ರವರಿ 21ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನುಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಲೂಯಿಸ್ ಲೋಬೋ ಅಧ್ಯಕ್ಷತೆ ವಹಿಸಲಿದ್ದಾರೆ. ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ದೇರಳಕಟ್ಟೆ ಯೆನಪೋಯ ಕಾಲೇಜಿನ ಡಾ.ರಚನಾ ಪ್ರಭು, ಹಿರಿಯ ನಾಗರಿಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ. ನಾಗರಾಜ್ ರಾವ್, ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಲಯನ್ ವಿ.ಜಿ ಶೆಟ್ಟಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು ಮತ್ತು ಸಾರ್ವಜನಿಕರಿಗೆ ಉಚಿತ ಸ್ತ್ರೀರೋಗ ಮ್ಯಾಮೊಗ್ರಾಫಿ ಪರೀಕ್ಷೆ, ಪ್ಯಾಪ್ ಸ್ಮೀಯರ್ ಪರೀಕ್ಷೆ (ಗರ್ಭ ಕೋಶ ಕಂಠ ಪರೀಕ್ಷೆ - ಸುಸಜ್ಜಿತ ಹೈಟೆಕ್ ಮೊಬೈಲ್ ಬಸ್ಸಿನಲ್ಲಿ ತಪಾಸಣೆ), ಹೃದಯ ಸಂಬಂಧಿತ ಕಾಯಿಲೆಗಳು, ಮಧುಮೇಹ ತಪಾಸಣೆ (ಖಾಲಿ ಹೊಟ್ಟೆ ಮತ್ತು ಆಹಾರ ಸೇವಿಸಿದ ನಂತರ), ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣೆ, ಕೀಲು ಮತ್ತು ಎಲುಬು, ದಂತ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆಯನ್ನು ನಡೆಸಲಾಗುವುದು.

ಶಿಬಿರದಲ್ಲಿ ಮಿಷನ್ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ.ದೀಪಾ ವೈ. ರಾವ್, ಡಾ. ಪವಿತ್ರ, ಡಾ. ಅಕ್ಷತಾ, ನೇತ್ರ ತಜ್ಞರಾದ ಡಾ. ಅಭಿನಯ್ ಅಶೋಕ್, ಕೀಲು ಮತ್ತು ಎಲುಬು ತಜ್ಞರಾದ ಡಾ. ಅರ್ಜುನ್ ಬಳ್ಳಾಲ್, ಸಾಮಾನ್ಯ ಆರೋಗ್ಯ ತಜ್ಞರಾದ ಡಾ. ಧನಂಜಯ ಭಟ್ ಹಾಗೂ ಡಾ. ಗಣೇಶ್ ಕಾಮತ್, ಮತ್ತು ದಂತ ತಜ್ಞರಾದ ಡಾ.ನಾಗೇಶ್ ನಾಯಕ್, ಡಾ. ಸಾರಿಕಾ ಭಾಗವಹಿಸಿ ಸಾರ್ವಜನಿಕರ ತಪಾಸಣೆ ನಡೆಸಲಿದ್ದಾರೆ.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:0820-2532222, 8310311448ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News