ಅ.21ರಂದು ಪೊಲೀಸ್ ಹುತಾತ್ಮರ ದಿನಾಚರಣೆ
Update: 2025-10-18 21:31 IST
ಉಡುಪಿ, ಅ.18: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮವು ಅ.21ರಂದು ಬೆಳಗ್ಗೆ 8 ಗಂಟೆಗೆ ಉಡುಪಿಯ ಚಂದು ಮೈದಾನದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕೇಂದ್ರ ಸ್ಥಾನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಮೀವುಲ್ಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಕರಾವಳಿ ಕಾವಲು ಪಡೆ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಮತ್ತಿತರರು ಉಪಸ್ಥಿತರಿರುವರು ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.