ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ, ಜೂ.18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಜೂನ್ 21ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರು, ಶಾಸಕರು, ಗಣ್ಯರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಯುಷ್ ವೈದ್ಯಕೀಯ ಚಿಕಿತ್ಸಾ ಪದ್ಧತಿಯ ಭಾಗವಾದ ಯೋಗಾಭ್ಯಾಸದಲ್ಲಿ ಭಾಗವಹಿಸಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.