×
Ad

ಜ.23ರಂದು ಕರ್ನಾಟಕ ಕ್ರೀಡಾಕೂಟ ಸಮಾರೋಪ: ರಾಜ್ಯಪಾಲರು, ಗೃಹ ಸಚಿವರ ಉಪಸ್ಥಿತಿ

Update: 2025-01-21 20:12 IST

ಉಡುಪಿ, ಜ.21: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಭಯ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ-2025ರ ಸಮಾರೋಪ ಸಮಾರಂಭ ಜ.23ರಂದು ಸಂಜೆ 5:00 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್, ರಾಜ್ಯದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಹಾಗೂ ಇತರ ಗಣ್ಯರು ಭಾಗವಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಮೂಡಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಕ್ರೀಡಾಸಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News