ಜೂ.23: ಕಾರಂತರ ಕುರಿತು ವಿಚಾರ ಸಂಕಿರಣ
ಉಡುಪಿ, ಜೂ.21: ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲಾ ಲೇಖಕಿಯರ ವಾಚಕಿ ಯರ ಸಂಘ ಇವರ ಸಹಯೋಗದಲ್ಲಿ ‘ಡಾ. ಶಿವರಾಮ ಕಾರಂತರ ಕಾದಂಬರಿಗಳಲ್ಲಿ ಸ್ತ್ರೀ ಸಂವೇದನೆ’ ವಿಷಯದ ಕುರಿಉ ಒಂದು ದಿನದ ವಿಶ್ವವಿದ್ಯಾನಿಲಯ ಮಟ್ಟದ ವಿಚಾರ ಸಂಕಿರಣವನ್ನು ಜೂನ್ 23ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡಿನ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಉದ್ಘಾಟಿ ಸಲಿದ್ದು, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉ.ಜಿ.ಲೇ.ವಾ ಸಂಘದ ಸ್ಥಾಪಕ ಅಧ್ಯಕ್ಷೆ ಮತ್ತು ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ, ನಗರ ಕೇಂದ್ರ ಗ್ರಂಥಾಲ ಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ, ಉ.ಜಿ.ಲೇ.ವಾ ಸಂಘದ ಅಧ್ಯಕ್ಷೆ ಡಾ. ನಿಕೇತನ ಭಾಗವಹಿಸಲಿದ್ದಾರೆ.
ಖ್ಯಾತ ಲೇಖಕಿ ಮತ್ತು ಭಾಷಾಂತರ ತಜ್ಞೆ ಡಾ.ಪಾರ್ವತಿ ಜಿ ಐತಾಳ್ ಮತ್ತು ಬಾರ್ಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥ ಪ್ರೊ. ಎಂ ಪ್ರಸಾದ್ ರಾವ್ ಉಪನ್ಯಾಸ ನೀಡಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಪ್ರಕಟಣೆ ತಿಳಿಸಿದೆ.