ಜು.23ರಂದು ಪಿ.ಲಂಕೇಶರ ಕಥೆಗಳ ಕುರಿತ ಉಪನ್ಯಾಸ
Update: 2025-07-19 22:42 IST
ಉಡುಪಿ, ಜು.19: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಉಡುಪಿ ಚಕೋರ ಸಾಹಿತ್ಯ ವಿಚಾರ ವೇದಿಕೆ, ಕುಂದಾಪುರ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜುಗಳ ಸಹಯೋಗದೊಂದಿಗೆ ‘ಮುಟ್ಟಿಸಿಕೊಂಡವನು’ ಪಿ.ಲಂಕೇಶರ ಕಥೆಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜು.23ರಂದು ಮಧ್ಯಾಹ್ನ 2ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಉಡುಪಿ ತೆಂಕನಿಡಿಯೂರು ಸರಕಾರಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ವಿಷ್ಣುಮೂರ್ತಿ ಪ್ರಭು ಉಪನ್ಯಾಸ ನೀಡಲಿರುವರು. ಅಧ್ಯಕ್ಷತೆಯನ್ನು ಕೋಟೇಶ್ವರ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಶೆಟ್ಟಿ ವಹಿಸಲಿರುವರು. ಅಕಾಡೆಮಿ ಸದಸ್ಯ ಡಾ.ಜಯಪ್ರಕಾಶ್ ಶೆಟ್ಟಿ ಹೆಚ್. ಪ್ರಾಸ್ತಾವಿಕವಾಗಿ ಮಾತನಾ ಡಲಿರುವರು. ಕೋಟೇಶ್ವರ ಕಾಲೇಜಿನ ಉಪನ್ಯಾಸಕ ಡಾ.ಸುಧಾಕರ ದೇವಾಡಿಗ, ಚಕೋರ ಜಿಲ್ಲಾ ಸಂಚಾಲಕರಾದ ಶಾಲಿನಿ ಯು.ಬಿ., ರಾಮಾಂಜಿ ಗೌರವ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.