×
Ad

ಡಿ.24ರಂದು ದಲಿತರ ಹಕ್ಕುಗಳಿಗಾಗಿ ಜಾಗೃತಿ ಸಮಾವೇಶ

Update: 2023-12-23 20:23 IST

ಉಡುಪಿ, ಡಿ.23: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ದಲಿತರ -ಶೋಷಿತರ ಹಕ್ಕುಗಳಿಗಾಗಿ ಆಗ್ರಹಿಸಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶವನ್ನು ಡಿ.24ರಂದು ಬೆಳಗ್ಗೆ 11ಗಂಟೆಗೆ ಬನ್ನಂಜೆಯ ಶ್ರೀ ನಾರಾಯಣಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮಾವೇಶವನ್ನು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ವಹಿಸಲಿರುವರು. ಮುಖ್ಯ ಭಾಷಣಗಾರರಾಗಿ ರಾಜ್ಯ ಪ್ರಧಾನ ಸಂಚಾಲಕರಾದ ಅಣ್ಣಾ ಮಾವಳ್ಳಿ ಶಂಕರ್ ಆಗಮಿಸಲಿರುವರು. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾಲಾರ್ಪಣೆಗೈಯಲಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News