ಮಾ.24: ವಿಶ್ವ ಕ್ಷಯರೋಗ ದಿನಾಚರಣೆ
Update: 2025-03-21 21:13 IST
ಉಡುಪಿ, ಮಾ.21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯತ್ - ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾ.24ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.