ನ.24ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಸೇವೆ ಸಭೆ
ಉಡುಪಿ, ನ.22: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಉಪಸ್ಥಿತಿಯಲ್ಲಿ ನ.24ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳನ್ನು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.