×
Ad

ಡಿ.25ರಿಂದ ಶಿರ್ವದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ

Update: 2023-12-23 19:06 IST
ಫೈಲ್‌ ಫೋಟೊ 

ಉಡುಪಿ, ಡಿ.23: ಬ್ರಹ್ಮಾವರ, ಉಡುಪಿ, ಕಾಪು ಬಳಿಕ ಶಿರ್ವದಲ್ಲಿ ಡಿ.25ರ ಸೋಮವಾರದಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಕಿಶೋರ ಯಕ್ಷಗಾನ ಸಂಭ್ರಮ ಪ್ರಾರಂಭಗೊಳ್ಳಲಿದೆ.

ಶಿರ್ವದ ಗಣೇಶ ವೇದಿಕೆ ಬಳಿಯ ಮಹಿಳಾ ಸೌಧದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಸೋಮವಾರ ಸಂಜೆ 7ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಡಿ.25ರಿಂದ 29ರವರೆಗೆ ಶಿರ್ವ ಪರಿಸರದ 8 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನವನ್ನು ನೀಡಲಿದ್ದಾರೆ.

ಕಿಶೋರ ಯಕ್ಷಗಾನವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಲಿದ್ದು, ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಂ.ಗಂಗಾಧರ ರಾವ್, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಬಬಿತಾ ಜೆ.ವಿ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು ಎಂದು ಯಕ್ಷ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಮುರಲಿ ಕಡೆಕಾರ್ ಮತ್ತು ಸಂಯೋಜಕ ವಿ.ಜಿ.ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News