ಜ.25ಕ್ಕೆ ರಾಷ್ಟ್ರೀಯ ಮತದಾರರ ದಿನಾಚರಣೆ
ಉಡುಪಿ, ಜ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಜನವರಿ 25ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್. ಗಂಗಣ್ಣನವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್, ಅಪರ ಜಿಲ್ಲಾಧಿಕಾರಿ (ಪ್ರಭಾರ) ನಾಗರಾಜ ನಾಯಕ್, ಉಡುಪಿ ತಾಲೂಕು ತಹಶೀಲ್ದಾರ್ ಪಿ.ಆರ್ ಗುರುರಾಜ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.