ಎ.25: ಉಡುಪಿ ಧರ್ಮಪ್ರಾಂತದಿಂದ ಪೋಪ್‌ಗೆ ಶೃದ್ಧಾಂಜಲಿ
Update: 2025-04-24 20:02 IST
ಉಡುಪಿ, ಎ.24: ಎ.21ರಂದು ನಿಧನರಾದ ಕಥೊಲಿಕ ಕ್ರೈಸ್ತ ಸಮುದಾಯದ ಪರಮಪವಿತ್ರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಸ್ಮರಣಾರ್ಥ ಎ.25ರ ಶುಕ್ರವಾರ ಉಡುಪಿ ಕಥೊಲಿಕ್ ಧರ್ಮಪ್ರಾಂತದ ನೇತೃತ್ವ ದಲ್ಲಿ ಅಖಿಲ ಕರ್ನಾಟಕ ಮಾನವ ಹಕ್ಕುಗಳ ಕ್ರೈಸ್ತ ಐಕ್ಯತಾ ಒಕ್ಕೂಟ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಸರ್ವ ಧರ್ಮ ಶೃದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ನಾಳೆ ಸಂಜೆ 5 ಗಂಟೆಗೆ ಉಡುಪಿಯ ಶೋಕಮಾತಾ ದೇವಾಲಯದಲ್ಲಿ ಧರ್ಮಾಧ್ಯಕ್ಷರಾದ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಅವರ ನೇತೃತ್ವದಲ್ಲಿ ಬಲಿಪೂಜೆ ನಡೆಯಲಿದ್ದು, ಬಳಿಕ 6 ಗಂಟೆಗೆ ಚರ್ಚಿನ ಆವೆ ಮರಿಯಾ ಸಭಾಂಗಣದಲ್ಲಿ ಸರ್ವ ಧರ್ಮದ ನಾಯಕರುಗಳ ಉಪಸ್ಥಿತಿಯಲ್ಲಿ ಶೋಕಸಭೆ ನಡೆಯಲಿದೆ ಎಂದು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಡೆನಿಸ್ ಡೆಸಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.