×
Ad

ಡಿ.25, ಡಿ.27ರಂದು ಬಿಜೆಪಿಯಿಂದ ’ಅಟಲ್ ಸ್ಮರಣೆ’: ಕುತ್ಯಾರು ನವೀನ್ ಶೆಟ್ಟಿ

Update: 2025-12-23 21:55 IST

ಉಡುಪಿ, ಡಿ.23: ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬೈಂದೂರಿನಲ್ಲಿ ಡಿ.25ರಂದು ಮಧ್ಯಾಹ್ನ 2ಗಂಟೆಗೆ ನಡೆಯಲಿರುವ ‘ಸಂಸದ್ ಖೇಲ್’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯ ದರ್ಶಿ ಬಿ.ಎಲ್.ಸಂತೋಷ್ ಪಾಲ್ಗೊಂಡು, ಸಂಜೆ ಗಂಟೆ 5ಕ್ಕೆ ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ’ಅಟಲ್ ಸ್ಮರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಡಿ.27ರಂದು ಸಂಜೆ 7ಗಂಟೆಗ್ಕೆೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿ ಕಾಪು ಮಂಡಲದ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಕಡಲ ಕಿನಾರೆಯಲ್ಲಿ ನಡೆಯಲಿರುವ ’ಕಾಪು ಕಡಲ ಪರ್ಬ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಡಿ.28ರಂದು ಬಿಜೆಪಿ ಕಾರ್ಕಳ ಮಂಡಲದ ನೇತೃತ್ವದಲ್ಲಿ ಸಚ್ಚರಿಪೇಟೆಯಲ್ಲಿ ಪ್ರಧಾನಿ ಮೋದಿ ಅವರ ’ಮನ್ ಕೀ ಬಾತ್’ ಕಾರ್ಯಕ್ರಮದ ಅಧಿಕೃತ ನೇರ ಪ್ರಸಾರವನ್ನು ವೀಕ್ಷಿಸಲಿದ್ದಾರೆ

ಡಿ.24ರಂದು ಸಂಜೆ 6ಗಂಟೆಗೆ ಬಿಜೆಪಿ ಉಡುಪಿ ನಗರ ಮಂಡಲದ ವತಿಯಿಂದ ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ ನೇತೃತ್ವದಲ್ಲಿ ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಅಂತರ್ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಕೂಟ ’ಅಟಲ್ ಟ್ರೋಫಿ’ ನಡೆಯಲಿದೆ. ಬೆಳಿಗ್ಗೆ ಗಂಟೆ 9ರಿಂದ ಮಹಿಳಾ ವಿಭಾಗದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಕೂಟ ನಡೆಯಲಿದೆ.

ಡಿ.25ರಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಉಡುಪಿ ಗ್ರಾಮಾಂತರ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬ್ರಹ್ಮಾವರ ನಂದಿಗುಡಿಯ ಬಳಿ ಪ.ಜಾ. ಸಮುದಾಯದ 14 ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ ಆಚರಣೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳ ಸಹಿತ ಜ.17ರಂದು ನಡೆಯುವ ಕರಾವಳಿಯ ನಾಡಹಬ್ಬ ’ಉಡುಪಿ ಶೀರೂರು ಮಠದ ಪರ್ಯಾಯೋತ್ಸವ’ದ ಸಂಬಂಧಿತ ಎಲ್ಲ ಕಾರ್ಯಕ್ರಮಗಳಲ್ಲಿ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸಹಿತ ಬಿಜೆಪಿ ಜಿಲ್ಲಾ ಪದಾಧಿಕಾರಿ ಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News