×
Ad

ಸಮುದ್ರದಲ್ಲಿ ಶೇ.25ರಷ್ಟು ಪ್ಲಾಸ್ಟಿಕ್ ತ್ಯಾಜ್ಯ: ಪೌರಾಯುಕ್ತ ರಾಯಪ್ಪ

Update: 2023-10-20 18:36 IST

ಮಲ್ಪೆ, ಅ.20: ಬೀಚ್‌ಗೆ ಬರುವ ಪ್ರವಾಸಿಗರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವುದರಿಂದ ಕಡಲಿನಲ್ಲಿ ಶೇ.25ರಷ್ಟು ಪ್ಲಾಸ್ಟಿಕ್ ತುಂಬಿದೆ. ಇದನ್ನು ನಿಯಂತ್ರಣ ಮಾಡಲು ಸಾಧ್ಯವಾಗದ ಸ್ಥಿತಿಗೆ ನಾವು ತಲುಪಿದ್ದೇವೆ. ಆದುದ ರಿಂದ ಈ ಬಗ್ಗೆ ಅರಿವು ಮೂಡಿಸಿ ಬೀಚ್ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂಬ ನಿಟ್ಟಿನಲ್ಲಿ ಸಂಕಲ್ಪ ಮಾಡಬೇಕು ಎಂದು ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ಹೇಳಿದ್ದಾರೆ.

ಉಡುಪಿಯ ಆಕಾಶ್ ಬೈಜೂಸ್ ವತಿಯಿಂದ ‘ಜಂಕ್ ದಿ ಪ್ಲಾಸ್ಟಿಕ್’ ಅಭಿಯಾನದ ಅಂಗವಾಗಿ ಮಲ್ಪೆ ಬೀಚ್‌ನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಪ್ಲಾಸ್ಟಿಕ್ ಬಳಕೆ ನಿರ್ಮೂಲನೆ ಮಾಡುವ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಬೀಚ್‌ಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಾಗಲು ನಾವೇ ಕಾರಣಕರ್ತರು. ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಎಷ್ಟೆ ದಂಡ ವಿಧಿಸಿದರೂ ತ್ಯಾಜ್ಯ ಎಸೆಯುವುದು ನಿಲ್ಲುವುದಿಲ್ಲ. ಆದುದರಿಂದ ಮರುಬಳಕೆ ಮಾಡು ವಂತಹ ವಸ್ತುಗಳನ್ನೇ ನಾವು ಬಳಸಬೇಕು. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯಗಳ ನಿಯಂತ್ರಣ ಸಾಧ್ಯವಾಗುತ್ತದೆ. ಆ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಆಕಾಶ್ ಬೈಜೂಸ್‌ನ ಹಿರಿಯ ಸಹಾಯಕ ನಿರ್ದೇಶಕ ಅನಿಲ್ ಕುಮಾರ್, ಸಹಾಯಕ ನಿರ್ದೇಶಕ ಶ್ಯಾಮ್ ಪ್ರಸಾದ್ ಮೊದಲಾದ ವರು ಉಪಸ್ಥಿತರಿದ್ದರು. ಡಾ.ಪ್ರದೀಪ್ ಸಾಮಗ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಈ ಅಭಿಯಾನದಲ್ಲಿ ಪಾಲ್ಗೊಂಡ ಆಕಾಶ್ ಬೈಜೂಸ್‌ನ ಬೋಧಕ ಸಿಬ್ಬಂದಿ ಹಾಗೂ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೌರಾಯುಕ್ತರ ಜೊತೆಗೂಡಿ ಬೀಚ್ ನಲ್ಲಿನ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News