×
Ad

26ನೆ ಸ್ವಚ್ಛ ಕಡಲತೀರ ಹಸಿರು ಕೋಡಿ ಅಭಿಯಾನ

Update: 2023-12-03 17:30 IST

ಕುಂದಾಪುರ‌ : ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ 26ನೆ ಸ್ವಚ್ಛ ಕಡಲತೀರ ಹಸಿರು ಕೋಡಿ ಅಭಿಯಾನ ರವಿವಾರ ನಡೆಯಿತು.

ಕಾರ್ಯಕ್ರಮಕ್ಕೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಸದಸ್ಯ ಸಿದ್ದೀಕ್ ಬ್ಯಾರಿ ಚಾಲನೆ ನೀಡಿ, ನಾವು ಮಾಡುವ ಈ ಸ್ವಚ್ಛತಾ ಅಭಿಯಾನವು ಇಡೀ ದೇಶಕ್ಕೆ ಮಾದರಿಯಾಗಬೇಕು. ಪ್ರತಿ ತಿಂಗಳು ನಡೆಯುವ ಈ ಅಭಿಯಾನಕ್ಕೆ ಸ್ವಪ್ರೇರಣೆಯಿಂದ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ಈ ಅಭಿಯಾನದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ಹಾಗೂ ವಿಶ್ವಸ್ಥ ಮಂಡಳಿಯ ಸದಸ್ಯ ಡಾ.ಆಸಿಫ್, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರು, ಪುರಸಭೆ ಅಧ್ಯಕ್ಷರು ಮತ್ತು ಸದಸ್ಯರು, ಪುರಸಭೆ ಮುಖ್ಯ ಅಧಿಕಾರಿಗಳು, ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಜಯಕರ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News