ಜೂ.26ರಂದು ಅಂತಾರಾಷ್ಟ್ರೀಯ ಮಾದಕದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ
ಉಡುಪಿ, ಜೂ.25: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ರೆಡ್ ರಿಬ್ಬನ್ ಕ್ಲಬ್ ಹಾಗೂ ಕಿರಿಯ ಯುವ ರೆಡ್ ಕ್ರಾಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮ ಜೂನ್ 26ರಂದು ಅಪರಾಹ್ನ 2 ಗಂಟೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲರಾದ ಲೀಲಾಬಾಯಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪಸಭಾಪತಿ ಡಾ. ಅಶೋಕ್ ಕುಮಾರ್ ವ್ಯೆ.ಜಿ, ಕಾರ್ಯದರ್ಶಿ ಡಾ.ಗಣನಾಥ್ ಎಕ್ಕಾರು, ಖಜಾಂಚಿ ರಮಾದೇವಿ, ಕಾಲೇಜಿನ ರೆಡ್‌ರಿಬ್ಬನ್ ಕ್ಲಬ್ ಸಂಯೋಜಕಿ ಸುಮನಾ ಉಪಸ್ಥಿತರಿರಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಡಾ. ಚೈತ್ರ ರಾವ್, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ರೆಡ್‌ಕ್ರಾಸ್‌ನ ಪ್ರಕಟಣೆ ತಿಳಿಸಿದೆ.