ಅ.26: ವ್ಯಂಗ್ಯ ಚಿತ್ರಕಲಾ ಕಾರ್ಯಾಗಾರ, ‘ನಮ್ಮೂರು’ ಚಿತ್ರಕಲಾ ಪ್ರಶಸ್ತಿ ಪ್ರದಾನ
ಮಣಿಪಾಲ, ಅ.17: ಮಣಿಪಾಲದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ವತಿಯಿಂದ ನಮ್ಮೂರು ಚಿತ್ರಕಲಾ ಪ್ರಶಸ್ತಿ ಪ್ರದಾನ ಮತ್ತು ಒಂದು ದಿನದ ವ್ಯಂಗ್ಯ ಚಿತ್ರಕಲಾ ಕಾರ್ಯಾಗಾರವನ್ನು ಅ.26ರಂದು ಬೆಳಿಗ್ಗೆ 10ರಿಂದ ಸಂಜೆ 4.30ರ ತನಕ ಹಮ್ಮ್ಮಿಕೊಳ್ಳಲಾಗಿದೆ.
ಉಡುಪಿಯ ಹಿರಿಯ ವ್ಯಂಗ್ಯಕಾರರಾದ ಚಿತ್ರಕಾರ ಜೇಮ್ಸ್ ವಾಜ್ ಮತ್ತು ಜೀವನ್ ಶೆಟ್ಟಿ ಅವರಿಂದ ಪ್ರಾತ್ಯಕ್ಷಿಕೆ, ರಚನಾ ಕ್ರಮ, ಪ್ರದರ್ಶನದ ಮೂಲಕ ಅರಿವು ಮೂಡಿಸಲಿರುವರು. 12 ರಿಂದ 75 ವಯೋಮಿತಿಯ ಆಸಕ್ತರು ಅ.23ರ ಒಳಗೆ ಮೊ-9741701211ಕ್ಕೆ ನೋಂದಾಯಿಸಲು ಕೋರಲಾಗಿದೆ.
ಕಾರ್ಯಕ್ರಮವನ್ನು ಟ್ರಿನಿಟಿ ಸೆಂಟ್ರಲ್ ಸ್ಕೂಲಿನ ಪ್ರಾಂಶುಪಾಲ ರೆ.ಫಾ. ಡೊಮೆನಿಕ್ ಸುನಿಲ್ ಲೋಬೋ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಉದಯವಾಣಿ ಮಣಿಪಾಲದ ವ್ಯಂಗ್ಯ ಚಿತ್ರಕಾರ ಜೇಮ್ಸ್ ವಾಜ್ ಮತ್ತು ಉಡುಪಿಯ ಹಿರಿಯ ವ್ಯಂಗ್ಯ ಚಿತ್ರಕಾರ ಜೀವನ್ ಶೆಟ್ಟಿ ಭಾಗವಹಿಸಲಿ ದ್ದಾರೆ ಎಂದು ಮಣಿಪಾಲ ತ್ರಿವರ್ಣ ಆರ್ಟ್ ಕ್ಲಾಸ್ಸಸ್‌ನ ಮಾರ್ಗದರ್ಶಕ ಹರೀಶ್ ಸಾಗಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.