×
Ad

ಅ.26: ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Update: 2025-10-23 18:58 IST

ಉಡುಪಿ, ಅ.23: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ, ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಅ.26ರಂದು ರವಿವಾರ ನಗರದ ಅಜ್ಜರಕಾಡು ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರವೊಂದನ್ನು ಬೆಳಗ್ಗೆ 8:00ರಿಂದ ಅಪರಾಹ್ನ 2:30ರವರೆಗೆ ಆಯೋಜಿಸಲಾಗಿದೆ.

ರಕ್ತದಾನ ಶಿಬಿರದಲ್ಲಿ ಇತ್ತೀಚೆಗೆ ನೂತನವಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ, ಮಂಗಳೂರು ವಿದ್ಯುತ್ ಶಕ್ತಿ ಸರಬರಾಜು ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಗೇರುಬೀಜ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಬೀಜ ಮತ್ತು ಸಾವಯವ ಪ್ರಾಮಾಣಿಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್‌ದಾಸ್, ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದರೊಂದಿಗೆ ಸಮಾಜದಲ್ಲಿ ಅಶಕ್ತರಾಗಿದ್ದು ಸ್ವಉದ್ಯಮದೊಂದಿಗೆ ಜೀವನ ಸಾಗಿಸಬೇಕಂಬ ಹಂಬಲ ಹೊಂದಿರುವ ಆಯ್ದ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ ಮಾಡಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಮೇಶ್ ಕಾಂಚನ್ ವಹಿಸಲಿದ್ದು, ವಿಧಾನಪರಿಷತ್‌ಸದಸ್ಯ ಐವನ್ ಡಿಸೋಜಾ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಗೌರವ ಅತಿಥಿಗಳಾಗಲಿದ್ದಾರೆ. ಹೊಲಿಗೆ ಯಂತ್ರ ಗಳನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಿತರಿಸಲಿದ್ದಾರೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಡಾ.ಆರತಿ ಕೃಷ್ಣ ಸನ್ಮಾನಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತ ಪಿ ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ ಭಾಗವಹಿಸಲಿದ್ದಾರೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಳೆದ ಮೂರು ವರ್ಷಗಳಿಂದಲೂ ನಿರಂತರವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಬಂದಿದ್ದು, ತೀರಾ ಬಡತನದಲ್ಲಿರುವ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಸುಮಾರು 600 ಯುನಿಟ್‌ಗಿಂತಲೂ ಹೆಚ್ಚು ರಕ್ತವನ್ನು ಸಂಗ್ರಹಿಸಿ ನೀಡಿದೆ. ಈ ಬಾರಿ ಉಡುಪಿ ಮತ್ತು ಬ್ರಹ್ಮಾವರ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ 250 ಯುನಿಟ್‌ಗಿಂತಲೂ ಹೆಚ್ಚು ರಕ್ತವನ್ನುಸಂಗ್ರಹಿಸಿ ನೀಡಬೇಕು ಎಂಬ ಗುರಿಯನ್ನು ಹೊಂದಿದೆ.

ಆಸಕ್ತ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಬಡ ರೋಗಿಗಳ ಜೀವ ಉಳಿಸುವ ಪುಣ್ಯಕಾರ್ಯಕ್ಕೆ ಸಹಕಾರ ನೀಡುವಂತೆ ಬ್ಲಾಕ್ ಕಾಂಗ್ರೆಸ್ ಪ್ರಕಟಣೆಯಲ್ಲಿ ವಿನಂತಿಸಿದೆ. ಹೆಚ್ಚಿನ ಮಾಹಿತಿಗಾಗಿ ರಕ್ತದಾನಿಗಳು 9449894375 (ಸತೀಶ್ ಪುತ್ರನ್), 9611393707 (ಸಂಜಯ್ ಆಚಾರ್ಯ), 8971433504 (ಕುಮಾರ್ ಬೈಕಾಡಿ), 7019286654 (ಅನಿತಾ ಬಾಬು ಪೂಜಾರಿ) ಸಂಪರ್ಕಿಸಲು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News