×
Ad

ಅ.26-27: ಉಚಿತ ಕಿವಿಯ ಶ್ರವಣ ತಪಾಸಣೆ

Update: 2025-10-07 18:20 IST

ಉಡುಪಿ, ಅ.7: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಜಿಲ್ಲೆ 317ಸಿ ಪ್ರಾಯೋಜಕತ್ವದಲ್ಲಿ ಅಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಮಣಿಪಾಲ, ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮವು ಅ.26 ಮತ್ತು 27ರಂದು ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ.

ಕಡ್ಡಾಯವಾಗಿ ನೋಂದಾಣಿ ಮಾಡಬೇಕು. ಹಿರಿಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಶ್ರವಣ ಪರೀಕ್ಷೆಯ ಹಳೆಯ ವರದಿಗಳಿದ್ದರೆ ತರಬೇಕು. ತಜ್ಞ ವೈದ್ಯರು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್- 8951804399, 9964583433ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News