×
Ad

ಅ.26, 27ರಂದು ಉಚಿತ ಶ್ರವಣ ತಪಾಸಣಾ ಶಿಬಿರ

Update: 2025-10-24 20:30 IST

ಉಡುಪಿ, ಅ.24: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ, ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ 317ಸಿ, ಟೀಮ್ ಈಶ್ವರ್ ಮಲ್ಪೆ ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅ.26 ಮತ್ತು 27ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ ನಡೆಯಲಿದೆ.

ಅ.27ರಂದು ಬೆಳಿಗ್ಗೆ 10 ಗಂಟೆಗೆ ಫಲಾನುಭವಿಗಳಿಗೆ ಶ್ರವಣಯಂತ್ರಕ್ಕೆ ಸಹಾಯಧನ ಮತ್ತು ಶ್ರವಣಯಂತ್ರ ವಿತರಣಾ ಸಮಾರಂಭ ನಡೆಯಲಿದೆಎಂದು ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9902344399/9964583433 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News