×
Ad

ಫೆ.27ರಿಂದ ಜೀವನ ವಿದ್ಯಾ ಶಿಬಿರ

Update: 2025-02-25 21:53 IST

ಉಡುಪಿ, ಫೆ.25: ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಘಟಕವು ಕಳೆದ ಹದಿಮೂರು ವರ್ಷಗಳಿಂದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ನಡೆಸುತ್ತಾ ಬಂದಿರುವ ಐದು ದಿನಗಳ ಸನಿವಾಸ ಶಿಬಿರ ಈ ವರ್ಷ ಫೆಬ್ರವರಿ 27ರಿಂದ ಮಾರ್ಚ್ 03ರ ವರೆಗೆ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ.

ಫೆ.27ರಂದು ಪೂರ್ವಾಹ್ನ 11:30ಕ್ಕೆ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳರು ಶಿಬಿರ ಉದ್ಘಾ ಟಿಸಲಿದ್ದಾರೆ. ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಡಾ.ಸುಧಾಕರ ಶೆಟ್ಟಿ, ಶ್ರೀನಿವಾಸ ಪ್ರಭು, ದಿನೇಶ್ ಪುತ್ರನ್, ರಮೇಶ್ ಕಾಂಚನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮಂಗಳೂರಿನ ಗುರುದತ್ತ ಬಂಟ್ವಾಳಕರ್ ನಿರ್ದೇಶನದಲ್ಲಿ ಸಂಪನ್ಮೂಲ ವ್ಯಕ್ತಿಗಳ ತಂಡ ಶಿಬಿರವನ್ನು ನಡೆಸಿಕೊಡಲಿದೆ. ಶಿಬಿರದಲ್ಲಿ ಆಂಗ್ಲ ಭಾಷಾ ಕೌಶಲ, ಸಂವಹನ ಕೌಶಲ, ನಾಯಕತ್ವ ತರಬೇತಿ, ವೃತ್ತಿ ಮಾರ್ಗದರ್ಶನ, ಸಮೂಹ ಸಹಭಾ ಗಿತ್ವ, ಸಮಾಜಮುಖಿ ಚಿಂತನೆ, ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದ ಕುರಿತು ತರಬೇತಿ ನೀಡಲಾಗುವುದು. ಸುಮಾರು 250 ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆಯಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News