×
Ad

ಆ.28ರಂದು ಸಂಗೀತ ಗಾಯನ ಕಾರ್ಯಕ್ರಮ

Update: 2025-08-26 21:08 IST

ಉಡುಪಿ, ಆ.26: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ಐಕ್ಯೂಎಸಿ ವಿಭಾಗಗಳ ಸಹಕಾರ ದೊಂದಿಗೆ ‘ಹಾಡಿರೇ ರಾಗಗಳ ತೂಗಿರೇ ದೀಪಗ’ ಸಂಗೀತ ಗಾಯನ ಕಾರ್ಯಕ್ರಮ ಆ.28ರಂದು ಬೆಳಗ್ಗೆ 9:30ಕ್ಕೆ ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದು, ಭಂಡಾರ್‌ಕಾರ್ಸ್‌ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಲೇಜು ವಿಶ್ವಸ್ಥ ಮಂಡಳಿ ಉಪಾಧ್ಯಕ್ಷ ಶಾಂತರಾಮ ಪ್ರಭು, ಕಾಲೇಜಿನ ಐಕ್ಯೂಎಸಿ ಸಂಯೋಜಕ ಸತ್ಯನಾರಾಯಣ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪಾಡ್ದನದ ಹಾಡುಗಳು, ಹಿಂದೂಸ್ಥಾನಿ ಗಾಯನ, ಸೋಬಾನೆ ಪದಗಳು, ಯಕ್ಷಗಾನ ಪದಗಳು, ಸುಗಮ ಸಂಗೀತ, ದಾಸರ ಪದಗಳು, ರಂಗಗೀತೆಗಳು, ವಚನಗಳು ಹೀಗೆ ವಿವಿಧ ಪ್ರಕಾರದ ಸಂಗೀತ ಕಾರ್ಯ ಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News