ಉಡುಪಿ, ಸೆ.26: ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕೈಗೊಳ್ಳಲಾದ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಭಾರೀ ವಿವಾದಕ್ಕೆ ಕಾರಣರಾಗಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೆ.28ರ ಸೋಮವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಸೆ.28ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುವ ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲೆಯ ಪಕ್ಷದ ಎಲ್ಲಾ ಹಿರಿಯ ನಾಯಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಪಂಚಾಯತ್ ಸದಸ್ಯರು, ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor