×
Ad

ನ.29ರಿಂದ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

Update: 2023-11-27 20:39 IST

ಉಡುಪಿ, ನ.27: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನ.29ರಿಂದ ಡಿಸೆಂಬರ್ 1ರವರೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ನ.29ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಅಂಷು ಕುಮಾರು, ಕಾರ್ಕಳ ನಕ್ಸಲ್ ನಿಗ್ರಹ ದಳದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಮತ್ತಿತರರು ಭಾಗವಹಿಸಲಿದ್ದಾರೆ.

ಕ್ರೀಡಾಕೂಟದ ಸಮಾರೋಪ ಸಮಾರಂಭ ಡಿ.1ರಂದು ಸಂಜೆ 4 ಗಂಟೆಗೆ ನಡೆಯಲಿದ್ದು, ಮಂಗಳೂರು ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ.ಚಂದ್ರಗುಪ್ತ ಭಾಗವಹಿಸಲಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News