×
Ad

ಜ.29ರಂದು ನೇರ ಸಂದರ್ಶನ

Update: 2025-01-27 21:26 IST

ಉಡುಪಿ, ಜ.27: ಜ.29ರ ಬುಧವಾರದಂದು ಬೆಳಗ್ಗೆ 10:30ಕ್ಕೆ ನಗರದ ಕಿನ್ನಿಮೂಲ್ಕಿಯ ಎ ಟು ಝಡ್ ಕಾರ್ ಆಕ್ಸೆಸ್ಸರೀಸ್ ಸರ್ವಿಸ್ ಬಳಿಯ ರಿಲಯನ್ಸ್ ಜಿಯೋ ಇನ್ಫೋಟೆಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆ ಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ವಿಸಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 9945856670, 8105774936 ಹಾಗೂ 9901472710ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News