ಆ.29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ
ಉಡುಪಿ, ಆ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ - ಕುಂದಾಪುರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರವೊಂದು ಆ.29ರಂದು ಬೆಳಗ್ಗೆ 9:30ಕ್ಕೆ ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಅಧ್ಯಕ್ಷ ಡಾ.ಜಯಕರ ಶೆಟ್ಟಿ, ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ದಿನೇಶ್ ಕಿಣಿ, ತೆಂಕನಿಡಿಯೂರು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಗಣೇಶ್ ಪ್ರಸಾದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.