×
Ad

ಫೆ.3: ಉಪಲೋಕಾಯುಕ್ತರಿಂದ ಕುಂದುಕೊರತೆ ಸಭೆ

Update: 2024-01-31 19:41 IST

ಉಡುಪಿ, ಜ.31: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನೇತೃತ್ವದಲ್ಲಿ ಸಾರ್ವಜನಿಕ ಅಹವಾಲು, ಕುಂದು ಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ಫೆ.3ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 5 ಗಂಟೆಯವರೆಗೆ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಗೆ ಉಪಲೋಕಾಯುಕ್ತ ನ್ಯಾಯ ಮೂರ್ತಿ ಕೆ.ಎನ್.ಫಣೀಂದ್ರ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುವಾರಿ ಅಧ್ಯಕ್ಷತೆ ವಹಿಸಲಿರುವರು ಎಂದು ಅವರು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News